×
Ad

ಬೆಂಗಳೂರು | ಸಾಲ ತೀರಿಸಲು ಮನೆ ಮಾಲಕಿಯ ಹತ್ಯೆ : ಯುವತಿಯ ಬಂಧನ

Update: 2024-05-15 18:48 IST

ಬೆಂಗಳೂರು : ಸಾಲ ತೀರಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೆ ಹತ್ಯೆ ಮಾಡಿದ್ದ ಪ್ರಕರಣವನ್ನು ಕೆಂಗೇರಿ ಠಾಣಾ ಪೊಲೀಸರು ಭೇದಿಸಿದ್ದಾರೆ.

ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ದಿವ್ಯಾ ಎಂಬುವರ ಕೊಲೆ ಪ್ರಕರಣ ಸಂಬಂಧ ಕೋಲಾರ ಮೂಲದ ಮೋನಿಕಾ (24) ಎಂಬಾಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೋನಿಕಾ ಕಂಪೆನಿಯೊಂದರಲ್ಲಿ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು, ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಪಡೆದಿದ್ದಳು. ಮೋನಿಕಾ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಮನೆ ಮಾಲಕಿ ದಿವ್ಯಾ ಅವರನ್ನು ಕೊಲೆಗೈದಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News