×
Ad

ಬೆಂಗಳೂರು | ಮೆಜೆಸ್ಟಿಕ್ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

Update: 2024-06-22 21:16 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಸುಗಮ ಸಂಚಾರ ಹಾಗೂ ಟ್ರಾಫಿಕ್ ಜಾಮ್ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶ ಹೊರಡಿಸಿದೆ.

ಇದಕ್ಕೆ ಬದಲಿಯಾಗಿ ಫ್ರೀಡಂ ಪಾರ್ಕ್ ಬಳಿ ನಿರ್ಮಾಣವಾಗಿರುವ ಸ್ಮಾರ್ಟ್ ಪಾರ್ಕಿಂಗ್ ಕಾಂಪ್ಲೆಕ್ಸ್ ಬಳಸಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಮೆಜೆಸ್ಟಿಕ್, ಗಾಂಧಿನಗರ ಹಾಗೂ ಆನಂದ್‍ರಾವ್ ಸರ್ಕಲ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ಭಾರಿ ದಂಡ ವಿಧಿಸುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News