×
Ad

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ತಳ್ಳಿ ಪೇಂಟರ್‌ನ ಹತ್ಯೆ

Update: 2024-06-29 19:23 IST

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮದ್ಯದ ಪಾರ್ಟಿ ನಡೆಯುವ ವೇಳೆ ಕೆಲಸಗಾರರ ನಡುವೆ ಜಗಳ ನಡೆದಿದ್ದು, ಈ ವೇಳೆ ಪೇಂಟರ್ ನನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ಇಲ್ಲಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ವರದಿಯಾಗಿದೆ.

ಜೂ.28ರ ರಾತ್ರಿ ಘಟನೆ ನಡೆಸಿದ್ದು, ಉತ್ತರ ಪ್ರದೇಶ ಮೂಲದ ವಿಶಾಲ್(24) ಎಂಬಾತ ಕೊಲೆಯಾದ ಪೇಂಟರ್ ಎಂದು ಗುರುತಿಸಲಾಗಿದೆ.

ಅಂಜನಾಪುರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಂಟರ್ ಹಾಗೂ ಇತರೆ ಕೆಲಸಗಾರರು ಕೆಲಸ ಮಾಡಿಕೊಂಡು ಅಲ್ಲೇ ಉಳಿದುಕೊಂಡಿದ್ದು, ರಾತ್ರಿ ಮದ್ಯದ ಪಾರ್ಟಿ ಮಾಡಿದ್ದಾರೆ. ಆ ವೇಳೆ ವಿಶಾಲ್ ಮತ್ತು ಆತನ ಸ್ನೇಹಿತನ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ ಎನ್ನಲಾಗಿದೆ. ಗಲಾಟೆಯಲ್ಲಿ ಸ್ನೇಹಿತ ಏಕಾಏಕಿ ವಿಶಾಲ್‍ನನ್ನು 2ನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ ಎಂದು ತಿಳಿದುಬಂದಿದೆ.

ಕೆಳಗೆ ಬಿದ್ದು ಗಂಭೀರ ಗಾಯಗೊಂಡ ವಿಶಾಲ್‍ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ತಲಘಟ್ಟಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News