×
Ad

ಬೆಂಗಳೂರು | ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಪ್ರಯಾಣಿಕನ ಬಂಧನ : 1.49 ಕೆ.ಜಿ. ಚಿನ್ನ ವಶಕ್ಕೆ

Update: 2024-08-22 19:36 IST

PC : x/@blrcustoms

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಆರೋಪಿಯಿಂದ 1.06 ಕೋಟಿ ರೂ. ಮೌಲ್ಯದ 1.49 ಕೆ.ಜಿ. ತೂಕದ ಗೋಲ್ಡ್ ಬಾರ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆ.17ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರೊಫೈಲಿಂಗ್ ಆಧಾರದ ಮೇಲೆ ಸಂಶಯಾಸ್ಪದ ವ್ಯಕ್ತಿಗಳನ್ನು ತಪಾಸಣೆ ನಡೆಸುವ ವೇಳೆ ಪ್ರಯಾಣಿಕನೊಬ್ಬ ಸಿಕ್ಕಿಬಿದ್ದಿದ್ದು, ಕೌಲಾಲಂಪುರದಿಂದ ಬಂದಿದ್ದ ಈತ ತನ್ನ ಒಳ ಉಡುಪಿನಲ್ಲಿ ಮರೆಮಾಚಿ ಗೋಲ್ಡ್ ಬಾರ್ ಅನ್ನು ಇಟ್ಟಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ವಿವರಿಸಿದ್ದಾರೆ.

ಆರೋಪಿಯನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ಮುಂದುವರೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News