×
Ad

ಬೆಂಗಳೂರು: ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫೈಓವರ್ ಬಂದ್

Update: 2024-01-09 20:03 IST
ಸಾಂದರ್ಭಿಕ ಚಿತ್ರ  (Photo: PTI)

ಬೆಂಗಳೂರು: ಪೀಣ್ಯ ಎಲಿವೇಟೆಡ್ ಫೈಓವರ್ ರಸ್ತೆಯಲ್ಲಿ ಜ.16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆಯ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಮಾಡುವ ಅವಶ್ಯಕತೆ ಇದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿದ್ದು, ಸಂಚಾರ ನಿರ್ಬಂಧಿಸಬೇಕೆಂದು ಕೋರಿತ್ತು. ಈ ಹಿನ್ನೆಲೆಯಲ್ಲಿ ವಯಾಡಕ್ಟ್ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಮಾಡಬೇಕಾಗಿರುವುದರಿಂದ ಜ.16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆಯ ವರೆಗೆ ಸಂಚಾರ ಬಂದ್ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪ್ರಯಾಣಿಕರು ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ಹತ್ತಿರ ಫೈಓವರ್ ಪಕ್ಕದ ಎನ್‍ಎಚ್-4 ಮತ್ತು ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ  ಪೊಲೀಸ್ ಠಾಣೆಯ ಜಂಕ್ಷನ್ ಮೂಲಕ ಎಸ್‍ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.

ಸಿಎಂಟಿಐ ಜಂಕ್ಷನ್‍ನಿಂದ ನೆಲಮಂಗಲ ಕಡೆಗೆ ಫೈಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫೈ ಓವರ್ ಪಕ್ಕದ ಎನ್.ಎಚ್-4 ಸರ್ವಿಸ್ ರಸ್ತೆಯಲ್ಲಿ ಎಸ್‍ಆರ್ ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಹಾಗೂ ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ನಗರ ಸಂಚಾರಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News