×
Ad

ಬೆಂಗಳೂರು | ರೇವ್ ಪಾರ್ಟಿ ಪ್ರಕರಣ : ನಟಿ ಹೇಮಾ 24 ಗಂಟೆ ಪೊಲೀಸ್ ಕಸ್ಟಡಿಗೆ

Update: 2024-06-05 21:38 IST

 Photo: Kolla Hema/Instagram)

ಬೆಂಗಳೂರು: ರೇವ್ ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆ ಆರೋಪ ಪ್ರಕರಣ ಸಂಬಂಧ ಬಂಧನದಲ್ಲಿರುವ ತೆಲುಗು ನಟಿ ಹೇಮಾ ಅವರನ್ನು 24 ಗಂಟೆ ಕಾಲ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದು, ವಿಚಾರಣೆ ನಡೆಸಲಿದ್ದಾರೆ.

ಇತ್ತೀಚಿಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ಆರೋಪದಡಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ಬಳಿಕ ಹೆಚ್ಚಿನ ತನಿಖೆ ಸಲುವಾಗಿ 24 ಗಂಟೆ ಕಸ್ಟಡಿಗೆ ಕೊಡಬೇಕೆಂದು ಸಿಸಿಬಿ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಕೋರ್ಟ್ ಸಮ್ಮತಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News