×
Ad

ಬೆಂಗಳೂರು| ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

Update: 2023-12-08 19:18 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೆಟ್ರೋದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಭದ್ರತಾ ಸಿಬ್ಬಂದಿ ಹಿಡಿದು ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ.

ಆರೋಪಿಯನ್ನು ಲೋಕೇಶ್ ಆಚಾರ್ ಎಂದು ಗುರುತಿಸಲಾಗಿದೆ. ಡಿ.7ರ ಗುರುವಾರ ಬೆಳಗ್ಗೆ 9.40ರ ಸುಮಾರಿಗೆ ಬೆಂಗಳೂರಿನ ರಾಜಾಜಿನಗರದಲ್ಲಿ ಮೆಟ್ರೋ ಹತ್ತಿದ್ದ 22 ವರ್ಷದ ಯುವತಿಯ ಮೈಕೈ ಮುಟ್ಟಿ ಆರೋಪಿ ಕಿರುಕುಳ ನೀಡಿದ್ದಾನೆ. ಯುವತಿ ಕೂಗುತ್ತಿದ್ದಂತೆ ಮುಂದಿನ ನಿಲ್ದಾಣದಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದು, ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಲೋಕೇಶ್ ಈ ಹಿಂದೆ ಕೂಡ ಬಿಎಂಟಿಸಿ ಬಸ್‍ನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆರೋಪಿಯಿಂ 20 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಗೊತ್ತಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News