×
Ad

ಬೆಂಗಳೂರು | ಶೌಚಗುಂಡಿ ಸ್ವಚ್ಚಗೊಳಿಸುವ ವೇಳೆ ಅಸ್ಥಿಪಂಜರ ಪತ್ತೆ!

Update: 2025-06-19 19:46 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ಇಲ್ಲಿನ ಬೇಗೂರಿನ ಕೈಗಾರಿಕಾ ಪ್ರದೇಶದ ಅಪಾರ್ಟ್‍ಮೆಂಟ್‍ವೊಂದರಲ್ಲಿ ಶೌಚಗುಂಡಿ ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧ ಬೇಗೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಜೂ.16ರಂದು ಗುತ್ತಿಗೆ ಕಾರ್ಮಿಕರು ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಈ ಬಗ್ಗೆ ಬೇಗೂರು ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು, ಸಿಕ್ಕ ಅಸ್ಥಿಪಂಜರದ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಜಾಂಶ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News