×
Ad

ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಅನಕೊಂಡ ಹಾವುಗಳ ಕಳ್ಳಸಾಗಣೆ : ಪ್ರಯಾಣಿಕನ ಬಂಧನ

Update: 2024-04-23 19:24 IST

Photo : x/@blrcustoms

ಬೆಂಗಳೂರು : ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ಹಳದಿ ಅನಕೊಂಡ ಹಾವುಗಳನ್ನು  ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದಡಿ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್‍ಗಳನ್ನು ಪರಿಶೀಲಿಸಿದಾಗ, ಹೆಬ್ಬಾವು, ಊಸರವಳ್ಳಿ, ಇಗ್ವಾನಾ, ಆಮೆಗಳು ಮತ್ತು ಅಲಿಗೇಟರ್ ಗಳು ಟ್ರಾಲಿ ಬ್ಯಾಗ್‍ಗಳಲ್ಲಿ ಬಚ್ಚಿಟ್ಟಿರುವುದು ಗೊತ್ತಾಗಿದೆ.

ವಿಷಯ ತಿಳಿದ ಕೂಡಲೇ ಬ್ಯಾಂಕಾಕ್‍ನಿಂದ ಆಗಮಿಸಿದ್ದ ಆರೋಪಿ ಪ್ರಯಾಣಿಕನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸುವುದಿಲ್ಲ. ಈ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯು ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News