×
Ad

ಬೆಂಗಳೂರು: ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Update: 2024-01-04 11:54 IST

ಬೆಂಗಳೂರು, ಜ.4: ಎದೆಗೆ ಗುಂಡು ಹಾರಿಸಿಕೊಂಡು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭವಾನಿ ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಕೊಡಗು ಮೂಲದ ತಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇವರು

ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.

ಖಾಸಗಿ ಕಂಪೆನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿರುವ ತಂದೆಯ ಗನ್ನಿಂದ ಎದೆಭಾಗಕ್ಕೆ ಗುಂಡು ಹಾರಿಸಿಕೊಂಡು ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಶು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮಯ್ಯರ ಕುಟುಂಬ ಕಳೆದ 15 ವರ್ಷಗಳಿಂದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭವಾನಿ ನಗರದಲ್ಲಿ ವಾಸವಿದೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News