×
Ad

ಬೆಂಗಳೂರು | ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯುವತಿಗೆ ಅಶ್ಲೀಲವಾಗಿ ನಿಂದಿಸಿದ ಆಟೋ ಚಾಲಕ!

Update: 2024-09-05 19:41 IST
Screengrab : x/@nihihiti

ಬೆಂಗಳೂರು: ಓಲಾದಲ್ಲಿ ಆಟೋ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಚಾಲಕ ಕೋಪಗೊಂಡು ಯುವತಿಯನ್ನು ಅಶ್ಲೀಲವಾಗಿ ನಿಂದಿಸಿದ ಘಟನೆ ಇಲ್ಲಿನ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರೂ ಓಲಾ ಆಟೋವನ್ನು ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಹಿನ್ನೆಲೆಯಲ್ಲಿ ಯುವತಿಯು ಮತ್ತೊಂದು ಆಟೋವನ್ನು ಬುಕ್ ಮಾಡಿದ್ದರು. ಬಳಿಕ ಮುಂಚಿತವಾಗಿ ಬಂದ ಆಟೋವನ್ನು ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆಟೋವನ್ನು ರದ್ದುಪಡಿಸಿದ್ದರು.

ಇದನ್ನು ಗಮನಿಸಿದ ಆಟೋ ಚಾಲಕ ಯುವತಿಯನ್ನು ಹಿಂಬಾಲಿಸಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆಯ ವಿಡಿಯೋವನ್ನು ಸೆರೆಹಿಡಿದ್ದ ಯುವತಿ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಯುವತಿಗೂ ನೊಟೀಸ್ ನೀಡಿ ವಿಚಾರಣೆಗೆ ಬರಲು ಸೂಚಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಆಟೋರಿಕ್ಷಾ ಚಾಲಕನೊಬ್ಬ ಯುವತಿಯನ್ನು ಅಶ್ಲೀಲವಾಗಿ ನಿಂದಿಸಿರುವುದು ಒಪ್ಪುವಂತದಲ್ಲ. ಇಂತಹ ಕೆಲ ಆಟೋ ಚಾಲಕರು ಎಲ್ಲರಿಗೂ ಕೆಟ್ಟ ಹೆಸರು ತರುತ್ತಾರೆ. ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’

-ಅಲೋಕ್ ಕುಮಾರ್, ಎಡಿಜಿಪಿ, ಸಂಚಾರ ಮತ್ತು ರಸ್ತೆ ಸುರಕ್ಷಿತಾ ವಿಭಾಗ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News