×
Ad

ಬೆಂಗಳೂರು | ಹೋಟೆಲ್‍ಗಳಲ್ಲಿ ಕಾಫಿ, ಟೀ ಬೆಲೆ ಹೆಚ್ಚಳ ಸಾಧ್ಯತೆ

Update: 2024-06-25 20:22 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯ ಸರಕಾರ ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಹೋಟೆಲ್ ಮಾಲೀಕರು ಕಾಫಿ, ಟೀ ಬೆಲೆ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಬೃಹತ್ ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ನಷ್ಟವಾಗುತ್ತದೆ. ಹೋಟಲ್ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ ಕಾಫಿ, ಟೀ ಬೆಲೆಯನ್ನು ಎಷ್ಟು ರೂಪಾಯಿಗೆ ಹೆಚ್ಚಿಸುವುದು ಎಂದು ಸಭೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News