×
Ad

ಬೆಂಗಳೂರು | ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಲೆಗೈದ ಮಗ!

Update: 2024-11-09 21:01 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ಕೊಲೆಗೈದಿರುವ ಘಟನೆ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕಂಠೇಶ್ವರ ಬಡಾವಣೆಯಲ್ಲಿ ವರದಿಯಾಗಿದೆ.

ಆಯೇಷಾ(50) ಎಂಬಾಕೆ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಆರೋಪಿ ಶುಫಿಯಾನ್ (32) ಎಂಬುವನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ನ.8ರ ಶುಕ್ರವಾರದಂದು ಈ ಘಟನೆ ನಡೆದಿದೆ. ಮೃತ ಮಹಿಳೆಯ ಪತಿ ಕೆಲ ವರ್ಷಗಳ ಹಿಂದೆಯೇ ನಿಧನರಾಗಿದ್ದು, ಆಯೇಷಾ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಮಗ ಶುಫಿಯಾನ್ ಕೆಲಸಕ್ಕೆ ಹೋಗದೆ ಓಡಾಡುತ್ತಿದ್ದ. ಕೆಲಸಕ್ಕೆ ಹೋಗುವಂತೆ ತಾಯಿ ಬುದ್ಧಿ ಹೇಳಿದರೂ ಆಕೆಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ನ.8ರ ಶುಕ್ರವಾರ ಬೆಳಗ್ಗೆ ಸಹ ಇದೇ ವಿಚಾರಕ್ಕಾಗಿ ಜಗಳವಾಗಿತ್ತು. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಮನೆಯಲ್ಲಿದ್ದ ಚಾಕುವಿನಿಂದ ತಾಯಿಗೆ ಇರಿದು ಹತ್ಯೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರೇ ಹಿಡಿದು ತಮಗೆ ಒಪ್ಪಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಿಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News