×
Ad

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಸವಾರರ ಮನೆಗೆ ಕ್ಯೂಆರ್ ಕೋಡ್ ಸಹಿತ ನೋಟಿಸ್

Update: 2024-03-01 18:17 IST

ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಸವಾರರ ಮನೆಗಳಿಗೆ ದಂಡ ಪಾವತಿಗಾಗಿ ಕ್ಯೂಆರ್ ಕೋಡ್ ಒಳಗೊಂಡಿರುವ ನೋಟಿಸ್ ಕಳುಹಿಸುವುದಾಗಿ ನಗರ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾ.1ರಿಂದ ಕ್ಯೂಆರ್ ಕೋಡ್ ಒಳಗೊಂಡಿರುವ ನೋಟಿಸ್ ಅನ್ನು ಆಟೊಮೇಷನ್ ಸೆಂಟರ್ ನಿಂದ ಜಾರಿ ಮಾಡಲಾಗುತ್ತಿದ್ದು, ಅಂಚೆ ಮೂಲಕ ಸವಾರರ ಮನೆ ಬಾಗಿಲಿಗೆ ತಲುಪಲಿದೆ ಎಂದು ಪೊಲೀಸರು ಹೇಳಿದ್ದಾರೆ.

ನಿಯಮ ಉಲ್ಲಂಘನಾ ದಿನಾಂಕ, ಸಮಯ, ಯಾವ ರೀತಿ ಸಂಚಾರ ಉಲ್ಲಂಘನೆ ಹಾಗೂ ದಂಡದ ಮೊತ್ತದ ಜೊತೆಗೆ ನೋಟಿಸ್ ಬಲಭಾಗದಲ್ಲಿ ಕ್ಯೂ ಆರ್ ಕೋಡ್ ನಮೂದಿಸಲಾಗಿದೆ. ಸವಾರರು ಸ್ಕ್ಯಾನ್ ಮಾಡಿ, ತಾನು ಉಲ್ಲಂಘನೆ ಮಾಡಿರುವ ಬಗ್ಗೆ ವಿಡಿಯೋ ಹಾಗೂ ಪೋಟೊ ವೀಕ್ಷಿಸಬಹುದಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ

ದಂಡ ಪಾವತಿಸಲು ಆನ್‍ಲೈನ್ ಮೂಲಕ ಲಿಂಕ್ ಕಲ್ಪಿಸಲಾಗಿದೆ. 2021ರ ನಂತರ ಉಲ್ಲಂಘಿಸಿದ ವಿಡಿಯೋ ಅಥವಾ ಫೋಟೊ ಲಭ್ಯವಿರಲಿವೆ. ಈಗಾಗಲೇ 133 ಮಾಲಕರಿಗೆ ಈ ರೀತಿಯ ನೋಟಿಸ್ ಕಳುಹಿಸಿರುವುದಾಗಿ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News