×
Ad

ಬೆಂಗಳೂರು | ಕಬ್ಬಿಣ ಕದಿಯಲು ಹೋಗಿ ಸಿಕ್ಕಿಬಿದ್ದ ಇಬ್ಬರಿಗೆ ಥಳಿತ, ಓರ್ವ ಮೃತ್ಯು

Update: 2024-06-13 19:51 IST

ಬೆಂಗಳೂರು: ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಬ್ಬಿಣ ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಅಲ್ಲಿನ ಕೆಲಸಗಾರರೇ ಹಿಡಿದು ಥಳಿಸಿದ್ದು, ಘಟನೆಯಲ್ಲಿ ಈ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿರುವ ಬಗ್ಗೆ ಗುರುವಾರ ವರದಿಯಾಗಿದೆ.

ಅಂಜನಾಪುರದ ಸಲ್ಮಾನ್ ಮೃತಪಟ್ಟಿರುವ ವ್ಯಕ್ತಿ. ಇನ್ನೋರ್ವ ಸಲೀಂ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದ್ದು, ಸಲ್ಮಾನ್ ಎಂಬುವನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ಕೋಣನಕುಂಟೆಯ ಆರ್ ಬಿಐ ಲೇಔಟ್‍ನಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಬೆಳಗಿನ ಜಾವದಲ್ಲಿ ಸ್ನೇಹಿತರಾದ ಸಲ್ಮಾನ್ ಹಾಗೂ ಸಲೀಂ ಸ್ಥಳಕ್ಕೆ ಬಂದು ಕಬ್ಬಿಣ ಕಳ್ಳತನ ಮಾಡುವಾಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News