ಕೇಂದ್ರ ಶಿಸ್ತು ಸಮಿತಿಗೆ ಆರು ಪುಟಗಳ ವಿವರಣೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್
ಹೊಸದಿಲ್ಲಿ : ಬಿಜೆಪಿ ಪಕ್ಷದನಾಯಕರ ವಿರುದ್ಧ ಬಂಡಾಯವೆದ್ದಿರು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಕೇಂದ್ರ ಶಿಸ್ತು ಸಮಿತಿಯ ಮುಂದೆ ಹಾಜರಾಗಿದ್ದಾರೆ. ಈ ವೇಳೆ ಪಕ್ಷದ ಆಂತರಿಕ ವಿಚಾರಗಳು ಹಾಗೂ ನಾಯಕರ ಕುರಿತು ಯಾವುದೇ ಹೇಳಿಕೆ ನೀಡದಂತೆ ಯತ್ನಾಳ್‌ಗೆ ಶಿಸ್ತು ಸಮಿತಿ ತಾಕೀತು ಮಾಡಿದೆ ಎಂದು ತಿಳಿದು ಬಂದಿದೆ.
ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಡಾಯ ಸಾರಿರುವ ಕಾರಣಕ್ಕೆ ಶೋಕಾಸ್ ನೋಟಿಸ್ ಪಡೆದಿರುವ ಅವರು ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರನ್ನು ಭೇಟಿ ಮಾಡಿ ಆರು ಪುಟಗಳ ವಿವರಣೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಕ್ಷದಲ್ಲಿನ ಬೆಳವಣಿಗೆಗಳು, ಹೊಂದಾಣಿಕೆ ರಾಜಕಾರಣ, ವಂಶವಾದದ ಕುರಿತು ಸುಮಾರು 75 ನಿಮಿಷಗಳ ಕಾಲ ಸವಿಸ್ತಾರವಾಗಿ ವಿವರಣೆ ನೀಡಿದ್ದೇನೆ. ನನ್ನ ಹೇಳಿಕೆಗಳನ್ನು ಅವರು ಸ್ವೀಕಾರ ಮಾಡಿದ್ದಾರೆ. ನಿಮ್ಮ ಭಾವನೆಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲ ಆಗಬೇಕು ಎಂಬ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ’ ಎಂದರು.