×
Ad

ʼವಕ್ಫ್ʼ ವಿಚಾರವಾಗಿ ಪ್ರಚೋದನಾಕಾರಿ ಭಾಷಣ ಆರೋಪ : ಪ್ರಕರಣ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೊಮ್ಮಾಯಿ

Update: 2024-11-13 00:04 IST

ಬೆಂಗಳೂರು : ʼವಕ್ಫ್ʼ ಆಸ್ತಿ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ‌ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಪೊಲೀಸರು ನೀಡಿರುವ ನೋಟಿಸನ್ನು ರದ್ದು ಕೋರಿ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ನ. 16ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿರುವ ನೋಟಿಸ್‌ ರದ್ದು ಕೋರಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News