×
Ad

‘ಧರ್ಮಸ್ಥಳ’ ಎಸ್‍ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಲಿ : ಬಸವರಾಜ ಬೊಮ್ಮಾಯಿ

Update: 2025-07-21 17:23 IST

ಬಸವರಾಜ ಬೊಮ್ಮಾಯಿ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ರಚನೆ ಮಾಡಿರುವುದನ್ನು ಸ್ವಾಗತ ಮಾಡುತ್ತೇವೆ. ಆದರೆ, ನಿಗದಿತ ಕಾಲಮಿತಿಯಲ್ಲಿ ಕಾನೂಬದ್ದವಾಗಿ ಎಸ್‍ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆಂದು ಹೇಳಬೇಕು, ಈ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದರು.

ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ಕೋರಿದರು.

ನುಣುಚಿಕೊಳ್ಳಬಾರದು: ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೊಟಿಸ್ ಕೊಟ್ಟಿದ್ದು, ಸಣ್ಣ ವ್ಯಾಪಾರಸ್ಥರಿಗೆ ಆಘಾತವಾಗಿದೆ. ಈಗ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

ದೊಡ್ಡ ಬದಲಾವಣೆ: ರಾಜ್ಯ ಕಾಂಗ್ರೆಸ್‍ನಲ್ಲಿ ಮುಂಬರುವ ದಿನಗಳಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರು. ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News