×
Ad

ಬಿಬಿಎಂಪಿ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಅನುಮೋದನೆ

Update: 2023-12-14 20:47 IST

ಬೆಳಗಾವಿ (ಸುವರ್ಣ ವಿಧಾನಸೌಧ) ಡಿ.14: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಬಿಎಂಪಿ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಗುರುವಾರ ಅನುಮೋದನೆ ಸಿಕ್ಕಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕ ಕುರಿತ ಚರ್ಚೆ ವೇಳೆ ಬಡಾವಣೆ ಮತ್ತು ಕಟ್ಟಡಗಳನ್ನು ವರ್ಗೀಕರಣ ಮಾಡಿ ಅದರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಬೇಕು ಎಂಬ ಸದಸ್ಯರಾದ ಶರವಣ ಮತ್ತು ಕೇಶವಮೂರ್ತಿ ಅವರ ಸಲಹೆಯನ್ನು ಪರಿಗಣಿಸುವುದಾಗಿ ಶಿವಕುಮಾರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News