ಬೆಂಗಳೂರು, ಸೆ. 9: ಅಕ್ರಮವಾಗಿ ಮಾರಾಟ ಮಾಡಲು ಸಾಗಿಸಲಾಗುತ್ತಿದ್ದ 180 ನಕ್ಷತ್ರ ಆಮೆಗಳನ್ನು (Star Tortoises) ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗಾಂಧಿನಗರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಪಾಸಣೆ ನಡೆಸಿದ ವೇಳೆ ಆತನ ಬಳಿ ನಕ್ಷತ್ರ ಆಮೆಗಳು ಪತ್ತೆಯಾಗಿವೆ. ಮೆಜೆಸ್ಟಿಕ್ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಗೆ ಹಸ್ತಾಂತರಿಸಲು ಆಮೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ವಶಪಡಿಸಿಕೊಂಡ ನಕ್ಷತ್ರ ಆಮೆಗಳು ಅಳಿವಿನಂಚಿನಲ್ಲಿರುವ ಅಪರೂಪದ ಜೀವಿಗಳಾಗಿದ್ದು, ಅವುಗಳ ಅಕ್ರಮ ಸಾಗಾಟ ಮತ್ತು ಮಾರಾಟ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅಪರಾಧವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಆಮೆಗಳ ಅಕ್ರಮ ಸಾಗಾಟದ ಜಾಲದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor