×
Ad

ಬೆಂಗಳೂರು | ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಹತ್ಯೆಗೈದ ತಂದೆ!

Update: 2024-10-19 20:58 IST

ಬೆಂಗಳೂರು : ಮದ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ ಇಲ್ಲಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ವರದಿಯಾಗಿದೆ.

ರಾಜೇಶ್(36) ಕೊಲೆಯಾದವರು ಎಂದು ಗುರುತಿಸಲಾಗಿದ್ದು, ಲಿಂಗಪ್ಪ ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ.

ಕ್ಯಾಬ್ ಚಾಲಕನಾಗಿದ್ದ ರಾಜೇಶ್, ದಿನವೂ ಮದ್ಯ ಕುಡಿದು ಬಂದು ಪೋಷಕರೊಂದಿಗೆ ಜಗಳವಾಡುತ್ತಿದ್ದ. ಮಗನ ಕಿರುಕುಳ ತಾಳಲಾರದೇ ಲಿಂಗಪ್ಪ ಹಾಗೂ ಆತನ ಪತ್ನಿ ಪ್ರತ್ಯೇಕವಾಗಿ ವಾಸವಾಗಿದ್ದರು. ಆದರೂ, ಸಹ ಕುಡಿದು ಬಂದು ಗಲಾಟೆ ಮಾಡುವುದನ್ನು ರಾಜೇಶ್ ನಿಲ್ಲಿಸಿರಲಿಲ್ಲ. ಅ.18ರ ರಾತ್ರಿಯೂ ಪಾನಮತ್ತನಾಗಿ ಬಂದಿದ್ದ ರಾಜೇಶ್, ಮನೆಯ ಗೇಟ್‍ನ್ನು ಒದ್ದು, ತಂದೆಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ ಎನ್ನಲಾಗಿದೆ.

ಇದರಿಂದ ಬೇಸತ್ತ ಲಿಂಗಪ್ಪ, ಮಗ ರಾಜೇಶ್‍ನ ಕೈಕಾಲು ಕಟ್ಟಿ ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ಇದರಿಂದಾಗಿ ರಾಜೇಶ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News