×
Ad

ಬೆಂಗಳೂರು | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವೃದ್ಧನ ಬಂಧನ

Update: 2025-01-20 21:11 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ದೇವಸ್ಥಾನದಿಂದ ಪ್ರಸಾದ ತೆಗೆದುಕೊಂಡು ಮನೆಗೆ ಹೋಗುವ ವೇಳೆಹನ್ನೊಂದು ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜ.19ರಂದು ದೇವಸ್ಥಾನದಿಂದ ಬಾಲಕ ಪ್ರಸಾದ ತೆಗೆದುಕೊಂಡು ಮನೆಗೆ ಹೋಗುವ ವೇಳೆ ವೃದ್ಧ ಆತನನ್ನು ಪುಸಲಾಯಿಸಿ ಟೆಂಟ್ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ. ನಂತರ ಮನೆಗೆ ಬಂದ ಬಾಲಕ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾನೆ.

ಆತಂಕಕ್ಕೊಳಗಾದ ಪೋಷಕರು ಈ ಬಗ್ಗೆ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ತನಿಖೆಕೈಗೊಂಡ ಪೊಲೀಸರು ತಳ್ಳು ಗಾಡಿನಲ್ಲಿ  ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 70 ವರ್ಷದ ವೃದ್ಧನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News