ಬೆಂಗಳೂರು | ಸಿಎಂ ಕಚೇರಿಯ ಟಿಪ್ಪಣಿಯೇ ನಕಲು ಮಾಡಿದ್ದ ವ್ಯಕ್ತಿ ಸೆರೆ
Update: 2025-02-16 21:00 IST
ಬೆಂಗಳೂರು : ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪ ಸಂಬಂಧ ಓರ್ವನನ್ನು ಇಲ್ಲಿನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಕೆಎಎಸ್ ಅಧಿಕಾರಿಯೊಬ್ಬರಿಗೆ ಹುದ್ದೆ ವರ್ಗಾವಣೆ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದ. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದಾರೆ.
ಇನ್ನೂ, ಬಂಧಿತ ಆರೋಪಿ ರಾಘವೇಂದ್ರ ಈ ಹಿಂದೆ ಹಲವು ಶಾಸಕರ ಬಳಿ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.