×
Ad

ವಿಧಾನಸೌಧದಲ್ಲಿ ಮದ್ಯದಂಗಡಿಗಳ ಸಂಘಟನೆಗಳ ಪ್ರತಿನಿಧಿಗಳ ಗಲಾಟೆ

Update: 2025-02-21 21:18 IST

ಬೆಂಗಳೂರು: ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಲು ಅವಕಾಶ ಸಿಗಲಿಲ್ಲವೆಂಬ ಕಾರಣಕ್ಕೆ ವಿಧಾನಸೌಧದಲ್ಲೇ ಮದ್ಯದಂಗಡಿಗಳ ಎರಡು ಸಂಘಟನೆಗಳ ಪ್ರತಿನಿಧಿಗಳ ನಡುವೆ ಗಲಾಟೆ ನಡೆದ ಪ್ರಸಂಗ ಶುಕ್ರವಾರ ವರದಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಮಾರಾಟ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಬಜೆಟ್ ಪೂರ್ವ ಸಭೆ ನಡೆಸಿದ್ದು, ಈ ಸಭೆಯನ್ನು ಮುಗಿಸಿ ಹೊರ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿ ಕಾರಿಡಾರ್‍ನಲ್ಲಿ ಮದ್ಯದಂಗಡಿಗಳ ಎರಡು ಸಂಘಟನೆಗಳ ಪ್ರತಿನಿಧಿಗಳು ಗಲಾಟೆ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ.

ಸಭೆಯಲ್ಲಿ ಎಲ್ಲ ಅಸೋಸಿಯೇಷನ್‍ಗಳಿಗೆ ಮಾತನಾಡಲು ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿನಿಧಿಗಳು, ಪರಸ್ಪರ ಕೂಗಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಈ ವೇಳೆಯಲ್ಲಿ ಪೊಲೀಸರು ಮಧ್ಯಪ್ರವೇಶ ಮಾಡಿ ಇಬ್ಬರನ್ನು ಕರೆದುಕೊಂಡು ಹೋಗಿ ಸಮಾಧಾನಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News