ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಭರ್ತಿ ವಿಚಾರ | ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಆದೇಶ
Update: 2025-05-29 00:33 IST
ಬೆಂಗಳೂರು : ಕೆಪಿಸಿಎಲ್‌ನ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ಪೀಠ, 2024ರ ಮೇ 8ರ ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಆದೇಶಿಸಿದೆ.
2024ರ ಫೆಬ್ರವರಿ 18ರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಿ ಎಂದು ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸೂಚನೆ ನೀಡಿ ಮಹತ್ವದ ಆದೇಶ ನೀಡಿದೆ ಎಂದು ಪ್ರಕಟನೆ ತಿಳಿಸಿದೆ.