ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ; ಕಿರಿಯ ವಿದ್ಯಾರ್ಥಿಯ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.17: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿಯನ್ನು ಇಲ್ಲಿನ ಹನುಮಂತನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಶುಕ್ರವಾರ ಈ ಕುರಿತು ಅ.15ರಂದು ಹನುಮಂತನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಸದ್ಯ 21 ವರ್ಷದ ಜೀವನ್ ಗೌಡ ಎಂಬ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಅ.10ರಂದು ಘಟನೆ ನಡೆದಿದ್ದು, ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸಂಬಂಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಕಾಲೇಜಿನ ಕ್ಯಾಂಪಸ್‍ನೊಳಗಿರುವ ಸಿಸಿಟಿವಿ ಹಾಗೂ ದೈಹಿಕ ಹಿಂಸೆಯ ಬಗೆಗಿನ ಸಾಕ್ಷ್ಯಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.