×
Ad

ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ: ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರುದ್ಧ ದೂರು

Update: 2025-10-22 13:33 IST

ಬೆಂಗಳೂರು : ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ತನ್ನನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ಸ್​ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಸಂದೇಶ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ನೀಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಸಂತ್ರಸ್ತೆ ಒತ್ತಾಯ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News