×
Ad

Bengaluru | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2025-11-30 01:11 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಬೆಂಗಳೂರು ಹೊರವಲಯ ಹೆಸರುಘಟ್ಟ ರಸ್ತೆಯ ಕಾಲೇಜೊಂದರ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ವರದಿಯಾಗಿದೆ.

ಹಾಸನ ಮೂಲದ ವತ್ಸಲ(19) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪಿ.ಜಿ.ಯಲ್ಲಿ ಶನಿವಾರ ಮಧ್ಯಾಹ್ನ 2:30ರ ಸುಮಾರಿಗೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ-ಫಾರ್ಮ್ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸೋಲದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆಕೆಯ ಸ್ನೇಹಿತರು ಹಾಗೂ ಮೊಬೈಲ್‍ಫೋನ್ ಪರಿಶೀಲನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಈ ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News