×
Ad

Bengaluru | ಕಾರಾಗೃಹದೊಳಗೆ ಸಿಗರೇಟ್ ಪ್ಯಾಕ್ ಕೊಂಡೊಯ್ಯುವಾಗ ಸಿಕ್ಕಿಬಿದ್ದ ವಾರ್ಡನ್!

Update: 2025-12-06 23:42 IST

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಸಿಗರೇಟ್ ಪ್ಯಾಕ್‍ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ.

ರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದು ಗುರುತಿಸಲಾಗಿದೆ. ಈತ ಹಿಂದಿನ ಜೂನ್‍ನಲ್ಲಿ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ವರ್ಗಾವಣೆಯಾಗಿದ್ದಾರೆ.

ಶುಕ್ರವಾರ(ಡಿ.5) ಸಂಜೆ ಕೆಎಸ್‍ಇಎಸ್‍ಎಫ್ ಸಿಬ್ಬಂದಿಯು ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯದ್ವಾರದ ಬಳಿ ತಪಾಸಣೆ ಮಾಡುತ್ತಿದ್ದಾಗ ಜೈಲ್ ವಾರ್ಡನ್ ರಾಹುಲ್ ಪಾಟೀಲ್ ಕರ್ತವ್ಯಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಅವರನ್ನು ತಪಾಸಣೆ ಮಾಡಿದಾಗ ಅವರು ಒಳ ಉಡುಪಿನಲ್ಲಿ ಎರಡು ಸಿಗರೇಟ್ ಪ್ಯಾಕ್‍ಗಳನ್ನು ಇಟ್ಟುಕೊಂಡಿರುವುದು ಗೊತ್ತಾಗಿದೆ.

ಈ ಬಗ್ಗೆ ಜೈಲಿನ ಅಧೀಕ್ಷರ ಪರಮೇಶ್ ಎಂಬುವರ ಗಮನಕ್ಕೆ ತರಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಘಟನೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜೈಲ್ ವಾರ್ಡನ್ ರಾಹುಲ್ ಪಾಟೀಲ್‍ನನ್ನು ಬಂಧಿಸಿ ಅವರ ಬಳಿ ಇದ್ದ ಸಿಗರೇಟ್ ಪ್ಯಾಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News