×
Ad

ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ

Update: 2026-01-09 21:27 IST

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು : ಇಲ್ಲಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, 3 ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಶಾಲೆಯ ಇ-ಮೇಲ್‍ಗೆ ಕಿಡಿಗೇಡಿಗಳು ಶುಕ್ರವಾರ ಸಂದೇಶ ಕಳುಹಿಸಿದ್ದಾರೆ.

ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬರುತ್ತಿದ್ದಂತೆ ಎಚ್ಚೆತ್ತ ಪ್ರಾಂಶುಪಾಲ ಪಿ.ಎಂ.ಪ್ರಕಾಶ್ ಅವರು ಸದಾಶಿವನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈ ವೇಳೆ ಯಾವುದೇ ಆರ್‌ಡಿಎಕ್ಸ್ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಖಚಿತವಾಗಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News