Bengaluru | ಅಗ್ನಿ ಅವಘಡ: ಐವರು ಕಾರ್ಮಿಕರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ನಡೆದಿದೆ.
ಜ.9ರ ಶುಕ್ರವಾರ ಬೆಳಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಬಿಹಾರ ಮೂಲದ ಅಂಶುರಾಜ್ ಕುಮಾರ್(18), ಹುಸೈನ್ ಖಾನ್(21), ರೋಹಿತ್ ಚೌದರಿ (20), ಆರಬೇಗ್ ಆಲಂ(26) ಹಾಗೂ ಮುಜಾಫರ್ ಹುಸೈನ್(19) ಎಂಬ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಐವರೂ ಚೊಕ್ಕಸಂದ್ರದಲ್ಲಿ ಒಂದೇ ರೂಮ್‍ನಲ್ಲಿ ವಾಸವಿದ್ದರು. ರೂಮ್‍ನಲ್ಲಿದ್ದ ಸಿಲಿಂಡರ್‍ನಿಂದ ಅಡುಗೆ ಅನಿಲ ಸೋರಿಕೆ ಆಗಿರುವುದನ್ನು ಗಮನಿಸದೆ ಶುಕ್ರವಾರ ಬೆಳಗ್ಗೆ ಟೀ ಕಾಯಿಸಲು ಲೈಟರ್ ಹೊತ್ತಿಸಿದಾಗ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ, ಗಾಯಾಳುಗಳಿಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸಂಬಂಧ ಪೀಣ್ಯಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.