×
Ad

ಬೆಂಗಳೂರಿನಲ್ಲಿ ಆರು ಪಿ.ಜಿ.ಗಳಿಗೆ ಬೀಗ ಹಾಕಿದ ಅಧಿಕಾರಿಗಳು

Update: 2026-01-16 21:59 IST

ಸಾಂದರ್ಭಿಕ ಚಿತ್ರ | PC : gemini AI

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ.ಗಳಿಗೆ (ಪೇಯಿಂಗ್ ಗೆಸ್ಟ್) ಬೀಗ ಮುದ್ರೆ ಹಾಕಲಾಗಿದ್ದು, ನ್ಯೂನ್ಯತೆಗಳಿರುವ ಪಿ.ಜಿ.ಗಳಿಂದ 1.96 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, 204 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ಆರೋಗ್ಯಾಧಿಕಾರಿಯಾದ ಡಾ. ಶಿವಕುಮಾರ್ ರವರ ನೇತೃತ್ವದಲ್ಲಿ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ತಪಾಸಣೆ ನಡೆಸಲಾಗಿದೆ. ಪಿ.ಜಿ.ಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ತಪಾಸಣೆ ನಡೆಸಲಾಗಿದೆ ಎಂದಿದ್ದಾರೆ.

ನ್ಯೂನ್ಯತೆಗಳಿರುವ ಪಿ.ಜಿ ಮಾಲಕರಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಲಾಗಿದ್ದು, ಉದ್ದಿಮೆದಾರರು ಏಳು ದಿನಗಳ ಒಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ಕಾರ್ಯನಿರ್ವಹಣೆ ಮಾಡಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News