Bengaluru | ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
Update: 2026-01-18 22:53 IST
ಸಾಂದರ್ಭಿಕ ಚಿತ್ರ | PC : PTI
ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ರವಿವಾರ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಅಪರಿಚಿತರಿಂದ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಮೂರು ಆರ್‍ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ಈ ಬಗ್ಗೆ ಮಾಹಿತಿ ತಿಳಿದು ತಕ್ಷಣ ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳಗಳು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.