×
Ad

Bengaluru | ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

Update: 2026-02-02 21:34 IST

ಬೆಂಗಳೂರು : ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ವರದಿಯಾಗಿದೆ.

ಇರ್ಫಾನ್ ಮುಲ್ಲಾನಿ(26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಜ.30ರಂದು ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಭಾರತಿನಗರ ಠಾಣೆಯಲ್ಲಿ ಅಸಹಜ ಸಾವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News