×
Ad

Bengaluru | ತೆರಿಗೆ ಬಾಕಿ ಪಾವತಿಸದ ಏಳು ಸಾವಿರ ಆಸ್ತಿಗಳ ಹರಾಜಿಗೆ ಕ್ರಮ

Update: 2026-02-03 19:22 IST

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7 ಸಾವಿರ ಆಸ್ತಿ ಮಾಲಕರು ಒಟ್ಟು 437ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದಿದ್ದು, ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳನ್ನು ಹರಾಜು ಹಾಕಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ತಿಳಿಸಿದೆ.

ಈ ಸಂಬಂಧ ಪ್ರಾಧಿಕಾರವು ಪ್ರಕಟನೆ ಹೊರಡಿಸಿದ್ದು, ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲಕರಿಗೆ ನೋಟಿಸ್‍ಗಳನ್ನು ಕಳುಹಿಸಲಾಗಿದೆ. ಆದರೂ ಅವರು ತೆರಿಗೆ ಪಾವತಿಸದೆ ಇರುವುದರಿಂದ, ಮುಂದಿನ ಕ್ರಮವಾಗಿ ಜಪ್ತಿ ಆದೇಶಗಳನ್ನು ಹೊರಡಿಸಲಾಗಿದೆ. ಜಪ್ತಿ ಆದೇಶಗಳ ಹೊರಡಿಸಿದ ಬಳಿಕವೂ ತೆರಿಗೆ ಪಾವತಿ ಆಗದಿರುವ ಹಿನ್ನೆಲೆಯಲ್ಲಿ, ಕೊನೆಯ ಕ್ರಮವಾಗಿ ಫೆ.17ರಂದು ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಈ ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಹರಾಜಿಗೆ ಸಂಬಂಧಿಸಿದ ನೋಟಿಸ್‍ಗಳ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಆನ್‍ಲೈನ್‍ನಲ್ಲಿ ಪ್ರಕಟಿಸಲಾಗಿದೆ. ಸಂಬಂಧಿತ ಆಸ್ತಿ ಮಾಲಕರು ತಕ್ಷಣವೇ https://BBMPTax.karnataka.gov.in  ಮೂಲಕ ಆನ್‍ಲೈನ್ ಪಾವತಿ ಮಾಡಿದಲ್ಲಿ, ಹರಾಜು ಪ್ರಕ್ರಿಯೆಯನ್ನು ತಪ್ಪಿಸಿಕೊಳ್ಳಬಹುದು ಎಂದು ಪ್ರಾಧಿಕಾರವು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News