×
Ad

Bengaluru | ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಮೃತ್ಯು

Update: 2026-06-13 18:55 IST

ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿಯ ನೂತನ ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ(ಜೂ.12) ತಡರಾತ್ರಿ ವರದಿಯಾಗಿದೆ.

ನಗರದ ಅರೆಬಿಕ್ ಕಾಲೇಜು ಸಮೀಪದ ಪಿಎನ್‍ಟಿ ಕಾಲೋನಿ ನಿವಾಸಿ ಸಾಜೀಯಾ(28) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಈ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹೊಸಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು ರಸ್ತೆಯಲ್ಲಿ ಎರಡು ಪ್ರತ್ಯೇಕ ಅಪಘಾತ-ಮೂವರು ಮೃತ್ಯು: ನಗರದ ಮೈಸೂರು ರಸ್ತೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಜೂ.12ರ ತಡರಾತ್ರಿ ಹಾಗೂ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ.

ಜೂ.12ರ ಶುಕ್ರವಾರ ತಡರಾತ್ರಿ 2 ಗಂಟೆ ಸುಮಾರಿಗೆ ಮೈಸೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಕೆಂಗೇರಿಯ ಆರ್.ಆರ್.ಡೆಂಟಲ್ ಕಾಲೇಜು ಬಳಿ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಪರಿಣಾಮ ಕೇರಳ ಮೂಲದ ಅತುಲ್ ಹಾಗೂ ಗೌರಿಶಂಕರ್ ಎಂಬುವರು ಸಾವನ್ನಪ್ಪಿದ್ದಾರೆ.

ಜೂ.13ರ ಮುಂಜಾನೆ 6:45ರ ಸುಮಾರಿಗೆ ಕೆಂಗೇರಿ ಬಳಿಯಲ್ಲೇ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಎರಡು ದ್ವಿಚಕ್ರ ವಾಹನಗಳಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸುಖದೇವ್(45) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಗಳಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News