×
Ad

Bengaluru | ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ಚಿತ್ರಹಿಂಸೆ: ಐವರು ಆರೋಪಿಗಳ ಬಂಧನ

Update: 2026-07-02 20:36 IST

ಸಾಂದರ್ಭಿಕ ಚಿತ್ರ | PC : AI


ಬೆಂಗಳೂರು : ನಗರದ ಕ್ಯಾಪ್‍ಜೆಮಿನಿ ಕಂಪೆನಿಯ ಶಿಶುಪಾಲನಾ ಕೇಂದ್ರದಲ್ಲಿ(ಡೇ ಕೇರ್ ಸೆಂಟರ್) ಎರಡು ವರ್ಷದ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‍ಎಎಲ್ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಶಿಶುಪಾಲನಾ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಶಿಶುಪಾಲನಾ ಕೇಂದ್ರ ಕೆಲಸ ಮಾಡುತ್ತಿದ್ದ ಮಂಜುಳಾ, ವಿಜಯಲಕ್ಷ್ಮೀ, ಭವಾನಿ, ಸಿಂಧು ಮತ್ತು ಬಿಂದು ಬಂಧಿತ ಆರೋಪಿಗಳಾಗಿದ್ದಾರೆ. ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ದೂರು ನೀಡಿದ್ದ ಉದ್ಯೋಗಿಯನ್ನು ಹಿಂದಿನ ತಿಂಗಳು ಕೆಲಸದಿಂದ ವಜಾ ಮಾಡಲಾಗಿತ್ತು. ಈ ಹಿಂದೆಯೂ ಹಲವು ಬಾರಿ ಮಕ್ಕಳ ಮೇಲೆ ದೌರ್ಜನ್ಯ ಆದಾಗ ಮೇಲ್ವಿಚಾರಕರ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಹೇಳಿದ್ದ ಸಿಬ್ಬಂದಿಯನ್ನು ಕೆಲಸದಿಂದಲೇ ವಜಾಗೊಳಿಸಲಾಗಿದೆ. ಬಳಿಕ ಇದೇ ಡೇಕೇರ್ ನಲ್ಲಿ ಕೆಲಸಮಾಡುತ್ತಿದ್ದ ಮತ್ತೊಬ್ಬರು ಸ್ನೇಹಿತ ಸಿಬ್ಬಂದಿಯ ಮೂಲಕ ಈ ವಿಡಿಯೋ ಮಾಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News