×
Ad

Bengaluru | ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರ ಬಂಧನ

Update: 2026-07-08 22:53 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಜು.3ರಂದು ಗಿರಿನಗರ ಠಾಣಾ ವ್ಯಾಪ್ತಿಯ ಎಚ್.ಕೆ.ಹಳ್ಳಿಯ 2ನೇ ಮುಖ್ಯರಸ್ತೆಯ ಹಾಗೂ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ವಿ.ಜಿ ನಗರದ ಬಂಡೆ ಗಣಪತಿ ದೇವಸ್ಥಾನದ ಹತ್ತಿರದ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಮಾಹಿತಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ, ಈ ಕೃತ್ಯದಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ದೂಡಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ವಶಕ್ಕೆ ಪಡೆದ ಇಬ್ಬರು ಮಹಿಳೆಯರನ್ನು ವಿಚಾರಣೆಗೆ ಒಳಪಡಿಸಿದಾಗ, ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ, ಅವರನ್ನು ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News