Bengaluru | ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರ ಬಂಧನ

Update: 2026-07-22 22:17 IST

ಬೆಂಗಳೂರು : ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇತರೆ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಆರೋಪಿಗಳ ವಿರುದ್ಧ ಹನುಮಂತನಗರ, ಚಂದ್ರಲೇಔಟ್, ಬಾಗಲಗುಂಟೆ ಹಾಗೂ ಯಲಹಂಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಖಚಿತ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಿದ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ನಾಲ್ವರು ಮಹಿಳೆಯರನ್ನು ವಿಚಾರಣೆಗೊಳಪಡಿಸಿದಾಗ, ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ, ಅವರನ್ನು ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News