Bengaluru | ಪ್ರಧಾನಿ ಮೋದಿಯನ್ನು ನಿಂದಿಸಿದ ಯುವಕನ ಬಂಧನ
Update: 2026-07-23 22:25 IST
ಬೆಂಗಳೂರು : ಪ್ರಧಾನಿ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ಬಂಧಿಸಿದ್ದಾರೆ. ಹಡ್ಸನ್ ಎಂಬು ಯುವಕ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಯುವಕನು ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದಾನೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಆರೋಪಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.