Bengaluru | ಸಿಲಿಂಟರ್ ಸ್ಫೋಟ, 9 ಮಂದಿ ಪ್ರಾಣಾಪಾಯದಿಂದ ಪಾರು
ಸಾಂದರ್ಭಿಕ ಚಿತ್ರ
ಬೆಂಗಳೂರು : ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬೊಮ್ಮಸಂದ್ರ ಗ್ರಾಮದಲ್ಲಿರುವ ಪಿ.ಜಿಯೊಂದರಲ್ಲಿ ಅಡುಗೆ ಅನಿಲ ಸಿಲಿಂಟರ್ ಸ್ಫೋಟವಾಗಿದ್ದು, 9 ಜನ ಹೊರ ರಾಜ್ಯದ ಕೂಲಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಿ.ಜಿ ಯೊಂದರ 2ನೇ ಮಹಡಿಯ ಒಂದೇ ಕೊಣೆಯಲ್ಲಿ 9 ಜನ ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕರು ವಾಸವಿದ್ದರು. ಜು.23ರಂದು ಬೆಳಿಗ್ಗೆ 6 ಗಂಟೆಯಲ್ಲಿ ಯಾರೋ ಅಪರಿಚಿತರು ವಿದ್ಯುತ್ ಸ್ವಿಚ್ ಆನ್ ಮಾಡಿದ್ದಾರೆ. ಕೊಣೆಯಲ್ಲಿ ಅಡುಗೆ ಅನಿಲ (ಎಲ್.ಪಿ.ಜಿ ಗ್ಯಾಸ್) ಸೋರಿಕೆಯಾಗಿದ್ದರಿಂದ ಬೆಂಕಿ ಕಾಣಿಸಿಕೊಂಡು ಸ್ಪೋಟಗೊಂಡಿದೆ. ಮಾಹಿತಿ ತಿಳಿದ ಕೊಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.
ಈ ಘಟನೆಯಲ್ಲಿ ಒಟ್ಟು 9 ಜನರಿಗೆ ಸುಟ್ಟಗಾಯಗಳಾಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಗಾಯಾಳುಗಳೆಲ್ಲಾ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಾಗಿದ್ದಾರೆ. ಗಾಯಾಳುಗಳಲ್ಲಿ 6 ಜನರಿಗೆ ಶೇ.60ರಷ್ಟು ಸುಟ್ಟಗಾಯಗಳಾಗಿದ್ದು, ಉಳಿದ ಮೂರು ಜನರಿಗೆ ಶೇ.20ರಷ್ಟು ಸುಟ್ಟ ಗಾಯಗಳು ಆಗಿವೆ ಎಂದು ಪೊಲೀಸರು ಹೇಳಿದ್ದಾರೆ.