Bengaluru | ಕ್ಯಾಬ್‌ಗೆ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Update: 2026-07-28 12:39 IST
ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ರಸ್ತೆಬದಿ ಕ್ಯಾಬ್‌ಗೆ ಕಾಯುತ್ತಿದ್ದ ಮಹಿಳೆಯ ಬಳಿ ಅಸಭ್ಯವಾಗಿ ಮಾತನಾಡಿ, ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ರಾಘವ್ ( 42 ) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
"ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಅಸಭ್ಯವಾಗಿ ವರ್ತಿಸಿದ್ದಾನೆ. ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಸಿದಾಗ, ನಿಂದಿಸಲು ಪ್ರಾರಂಭಿಸಿದ. ಈ ಘಟನೆಯನ್ನು ನನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಆರೋಪಿ, ತಕ್ಷಣವೇ ಸ್ಥಳದಿಂದ ಹೋಗಿದ್ದಾನೆ" ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ರಾಮಮೂರ್ತಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ.