Bengaluru | ರೇವ್ ಪಾರ್ಟಿಗೆ ಸಿಸಿಬಿ ದಾಳಿ: ಮೂವರ ಬಂಧನ

Update: 2026-07-30 01:16 IST

ಬೆಂಗಳೂರು : ಎಚ್‍ಎಸ್‍ಆರ್ ಲೇಔಟ್‍ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಮಹಿಳಾ ಘಟಕದ ಸಿಬ್ಬಂದಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜನೆ ಮಾಡಿದ್ದ ದೀಕ್ಷಿತ್, ವೇದಾಂತ್ ಪಂಡಿತ್ ಹಾಗೂ ಶಂಕರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಮಹಿಳಾ ಘಟಕದ ಸಿಬ್ಬಂದಿ ನಿಷೇಧಿತ ಹುಕ್ಕಾ, ಇ-ಸಿಗರೇಟ್ ಹಾಗೂ ಮದ್ಯ ಜಪ್ತಿ ಮಾಡಿ, ಪಾರ್ಟಿಯಲ್ಲಿ ಸಿಲುಕಿದ್ದ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಎಚ್‍ಎಸ್‍ಆರ್ ಲೇಔಟ್‍ನ ವಿಲ್ಲಾವೊಂದರಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಇಡೀ ರಾತ್ರಿ ಸರ್ವಿಸ್ ವಿಲ್ಲಾದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ ಗ್ಯಾಂಗ್, ಇ-ಸಿಗರೇಟ್, ಹುಕ್ಕಾ ಮದ್ಯದ ಅಮಲಿನಲ್ಲಿ ತೇಲಾಡುತ್ತಿತ್ತು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ಘಟಕದಿಂದ ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿ, ಮೂವರು ಆಯೋಜಕರನ್ನು ಬಂಧಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News