Bengaluru | ಖಾಲಿ ನಿವೇಶನದಲ್ಲಿ ಮಹಿಳೆಯ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಸಂಪಿಗೆಹಳ್ಳಿಯ ಎಂ.ಎಸ್. ನಗರದ ಖಾಲಿ ನಿವೇಶನದಲ್ಲಿ ಮಹಿಳೆಯ ಶಂಕಾಸ್ಪದ ಮೃತದೇಹ ಪತ್ತೆಯಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.
ಜಾಗದಲ್ಲಿ ದುರ್ವಾಸನೆ ಬರುತ್ತಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹವನ್ನು ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಿ, ಗುರುತು, ಪತ್ತೆ ಹಚ್ಚಲು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.