ಸಾಂದರ್ಭಿಕ ಚಿತ್ರ

ಬೆಂಗಳೂರು : ನಗರದ ಎಲ್ಲ ವಿಭಾಗಗಳ ವ್ಯಾಪ್ತಿಯಲ್ಲಿರುವ ಹೋಟೆಲ್‍ಗಳು, ವ್ಯಾಪಾರ ಮಳಿಗೆಗಳು, ಎಪಿಎಂಸಿ ಮಾರುಕಟ್ಟೆ, ಶೋರೂಮ್‍ಗಳು ಹಾಗೂ ಇ-ಕಾಮರ್ಸ್ ಕಂಪನಿಗಳ ದಾಸ್ತಾನು ಮಳಿಗೆಗಳು ಸೇರಿದಂತೆ ವಿವಿಧೆಡೆ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ಧ ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 88 ಮಕ್ಕಳ ರಕ್ಷಣೆ ಮಾಡಿದ್ದಾರೆ.

ಪೂರ್ವ ವಿಭಾಗದಲ್ಲಿ 71 ಹಾಗೂ ಉತ್ತರ ವಿಭಾಗದ ವ್ಯಾಪ್ತಿಯಲ್ಲಿ 17 ಅಪ್ರಾಪ್ತರನ್ನು ರಕ್ಷಿಸಲಾಗಿದೆ. ಬಾಲಕಾರ್ಮಿಕರಿಂದ ಬಲವಂತವಾಗಿ ಕೆಲಸ ಮಾಡಿಸುತ್ತಿದ್ದ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉತ್ತರ ವಿಭಾಗದ ಡಿಸಿಪಿ ನೇಮಗೌಡ ಮಾತನಾಡಿ, ರಕ್ಷಿಸಲ್ಪಟ್ಟ ಎಲ್ಲ ಮಕ್ಕಳೂ ಹೊರರಾಜ್ಯದವರಾಗಿದ್ದು, ಅವರಿಂದ ಪ್ರಸ್ತುತ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಕ್ಕಳ ಪೋಷಕರು ಯಾರು ಮತ್ತು ಅವರನ್ನು ಇಲ್ಲಿಗೆ ಕರೆತಂದವರು ಯಾರು ಎಂಬ ವಿವರಗಳನ್ನು ಕಲೆಹಾಕಲಾಗುತ್ತಿದೆ. ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಹಾಗೂ ಸಂಸ್ಥೆಗಳ ಮಾಲಕರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor