ಬೆಂಗಳೂರು : ಜಯನಗರ 9ನೇ ಬ್ಲಾಕ್‍ನ ಮೊಬೈಲ್ ಶೋರೂಮ್ ಮುಂಭಾಗದ ಸಾರ್ವಜನಿಕರ ರಸ್ತೆಯಲ್ಲಿ ಮಾರಾಕಾಸ್ತ್ರಗಳನ್ನು ಹಿಡಿದು ವ್ಯಕ್ತಿಯ ಕೊಲೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತಿಲಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನದೀಂ ಮತ್ತು ಜುನೈದ್ ಎಂದು ಗುರುತಿಸಲಾಗಿದೆ.

ಜಯನಗರ 9ನೇ ಬ್ಲಾಕ್ ಮೊಬೈಲ್ ಶೂರೂಮ್ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಆರೋಪಿಯು ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆ ಹಾಕುತ್ತ ಸಾರ್ವಜನಿಕರಿಗೆ ಭಯವನ್ನುಂಟು ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿತ್ತು. ಈ ಕುರಿತು ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿರುತ್ತದೆ.

ಪ್ರಕರಣದ ತನಿಖೆಯನ್ನು ನಡೆಸಿ ಘಟನೆ ನಡೆದ ನಾಲ್ಕು ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೆಯೇ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor