ಬೆಂಗಳೂರು : ದಿಲ್ಲಿ ಪೊಲೀಸರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಪತ್ರಕರ್ತರ ಪರವಾಗಿ ಒಗ್ಗಟ್ಟು ಪ್ರದರ್ಶಿಸಲು ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಚಪ್ಪಲಿ ಸೇವೆ’ ನಡೆಸಿ ಆಕ್ರೋಶ ಹೊರಹಾಕಲಾಯಿತು.

ಗುರುವಾರ ಸಂಜೆ ಫ್ರೀಡಂ ಪಾರ್ಕಿನಲ್ಲಿ ಜಮಾಯಿಸಿದ ಸಾವಿರಾರು ಯುವತಿಯರು ಸಿಜೆಪಿ ಪ್ರತಿಭಟನೆ ಬೆಂಬಲಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

ರಾಜಧಾನಿಯ ಜಂತರ್ ಮಂತರ್ ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದಿಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಪತ್ರಕರ್ತರೊಂದಿಗೆ ಒಗ್ಗಟ್ಟು ಪ್ರದರ್ಶಿಸುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor