Bengaluru | ಆಯುಷ್ಮಾನ್ ಖುರಾನಾಗೆ ಬೆದರಿಕೆ ಹಾಕಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ | PC : Image by wirestock on Magnific
ಬೆಂಗಳೂರು : ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಹಾರ ಮೂಲದ ಐಐಟಿ ಪದವೀಧರನನ್ನು ಮುಂಬೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಐಐಟಿ ಪದವೀಧರ ಹಾಗೂ ಐಟಿ ಎಂಜಿನಿಯರ್ ವೈಭವ್ ಮಿಶ್ರಾ (30) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕ ಆಯುಷ್ಮಾನ್ ಖುರಾನಾ ಸೇರಿದಂತೆ ಬಾಲಿವುಡ್ ನಟರಿಗೆ ಬೆದರಿಕೆ ಸಂದೇಶ ಹಾಗೂ ಧ್ವನಿ ಸಂದೇಶಗಳನ್ನು ಕಳುಹಿಸಿ, ಕೋಟ್ಯಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದನು ಎನ್ನಲಾಗಿದೆ.
ತ್ವರಿತವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಗ್ಯಾಂಗ್ ಸದಸ್ಯನಂತೆ ನಟಿಸಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯು ಬಳಸಲಾಗಿದ್ದ ಜಾಲತಾಣ ಖಾತೆಗಳು ಹಾಗೂ ಧ್ವನಿ ಸಂದೇಶಗಳ ಡಿಜಿಟಲ್ ಜಾಡನ್ನು ಪ್ರಕರಣದ ತನಿಖೆಯ ವೇಳೆ ಪೊಲೀಸರು ಪರಿಶೀಲಿಸಿದ್ದಾರೆ. ಅದರ ಸುಳಿವು ಬೆಂಗಳೂರಿನವರೆಗೆ ತಲುಪಿದೆ.