Bengaluru | ಮೂವರು ಡ್ರಗ್ಸ್ ಪೆಡ್ಲರ್ಗಳ ಬಂಧನ, 11.74 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
ಸಾಂದರ್ಭಿಕ ಚಿತ್ರ
ಬೆಂಗಳೂರು : ಯಲಹಂಕ ಉಪನಗರ ಹಾಗೂ ಭಾರತಿನಗರ ಪೊಲೀಸ್ ಠಾಣಾ ಪೊಲೀಸರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದು, 11.74 ಕೋಟಿ ರೂ. ಮೌಲ್ಯದ 5 ಕೆಜಿ 870 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿಯನ್ನು ಆಧರಿಸಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ದೂರುದಾರರು ತಿಳಿಸಿದ ಸ್ಥಳಗಳ ಮೇಲೆ ದಾಳಿ ಮಾಡಿ, ಸ್ಥಳೀಯ ವ್ಯಕ್ತಿಗಳನ್ನು ವಿವಿಧ ದಿನಾಂಕಗಳಂದು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ ಎಂದು ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ತಿಳಿಸಿದ್ದಾರೆ.