Bengaluru | 2.41 ಕೋಟಿ ರೂ. ಮೌಲ್ಯದ 6.9 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶ; ಓರ್ವ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತವನ್ನು ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಆತನಿಂದ 2.41 ಕೋಟಿ ರೂ. ಮೌಲ್ಯದ 6.9 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಕೌಲಾಲಂಪುರದಿಂದ ಬೆಂಗಳೂರಿಗೆ ಆಗಮಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ನಡೆಸಿದ ತಪಾಸಣೆ ವೇಳೆ ಆತನ ಲಗೇಜ್‍ನಲ್ಲಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಎನ್‍ಡಿಪಿಎಸ್ ಕಾಯಿದೆ, 1985 ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.